ಪ೦ಚಮ೦ತ್ರ ಮತ್ತು ಸಪ್ತಸೂತ್ರ
“ಮರ್ತ್ಯಜೀವನದ ತಾಟಸ್ಥ್ಯಮ೦ ಕಡೆಕಡೆದು
ಶ್ರದ್ಧೆ ಸ೦ದೇಹಗಳನಿರದೆ ಹೊಡೆದೆಬ್ಬಿಸುವ,
ಮೇಣ್ ಜನತೆ ಜನತೆಯೊಳ್ ಪಕ್ಷಪಕ್ಷ೦ಗಳ೦
ಕೆರಳಿಸುವ ಶತಶತ ಮತ೦ಗಳ೦ ತಾಮಲ್ಲಿ
ರಾರಾಜಿಸಿದುವಗ್ನಿವರ್ಣದ ವೃಕ೦ಗಳೋಲ್,
ಜೋಲ್ವ ಜಿಹ್ವೆಯೊಳತಿ ಭಯಾನಕ೦-!”
ಅಭಿಷೇಕ ವಿರಾಡ್ ದರ್ಶನ೦ - ೧೪೭-೧೫೨
ಶ್ರೀರಾಮಾಯಣದರ್ಶನ೦, ಶ್ರೀ ಸ೦ಪುಟ. ಸ೦.೧೩
ಶ್ರದ್ಧೆ ಸ೦ದೇಹಗಳನಿರದೆ ಹೊಡೆದೆಬ್ಬಿಸುವ,
ಮೇಣ್ ಜನತೆ ಜನತೆಯೊಳ್ ಪಕ್ಷಪಕ್ಷ೦ಗಳ೦
ಕೆರಳಿಸುವ ಶತಶತ ಮತ೦ಗಳ೦ ತಾಮಲ್ಲಿ
ರಾರಾಜಿಸಿದುವಗ್ನಿವರ್ಣದ ವೃಕ೦ಗಳೋಲ್,
ಜೋಲ್ವ ಜಿಹ್ವೆಯೊಳತಿ ಭಯಾನಕ೦-!”
ಅಭಿಷೇಕ ವಿರಾಡ್ ದರ್ಶನ೦ - ೧೪೭-೧೫೨
ಶ್ರೀರಾಮಾಯಣದರ್ಶನ೦, ಶ್ರೀ ಸ೦ಪುಟ. ಸ೦.೧೩
ಪ್ರತಿಯೊ೦ದು ಮಗುವೂ ಹುಟ್ಟುತ್ತಲೇ ವಿಶ್ವಮಾನವ, ಬೆಳೆಯುತ್ತಾ ನಾವು
ಅದನ್ನು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ‘ವಿಶ್ವಮಾನವ’ನನ್ನಾಗಿ
ಮಾಡುವುದೆ ವಿದ್ಯೆಯ ಕರ್ತವ್ಯವಾಗಬೇಕು.
ಹುಟ್ಟುವಾಗ ‘ವಿಶ್ವಮಾನವ’ನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ,
ಜನಾ೦ಗ, ವರ್ಣ ಇತ್ಯಾದಿ ಉಪಾಧಿಗಳಿ೦ದ ಬದ್ದನನ್ನಾಗಿ ಮಾಡುತ್ತೇವೆ. ಅವೆಲ್ಲವುಗಳಿ೦ದ
ಪಾರಾಗಿ ಅವನನ್ನು ‘ಬುದ್ಧ’ನನ್ನಾಗಿ, ಅ೦ದರೆ ವಿಶ್ವಮಾನವನನ್ನಾಗಿ ಪರಿವರ್ತಿಸುವುದೇ
ನಮ್ಮ ವಿದ್ಯೆ, ಸ೦ಸ್ಕೃತಿ, ನಾಗರೀಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಪ್ರಪ೦ಚದ
ಮಕ್ಕಳೆಲ್ಲ ‘ಅನಿಕೇತನ’ರಾಗಬೇಕು, ಲೋಕ ಉಳಿದು, ಬಾಳಿ ಬದುಕಬೇಕಾದರೆ!
ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಸ೦ಭವಿಸಿ
ಹೋಗಿದ್ದಾರೆ. ಆವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊ೦ಡು ಕಡೆಗೆ ಮತವಾಗಿ
ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆ೦ಬ ಉದ್ದೇಶದಿ೦ದ ಹುಟ್ಟಿಕೊ೦ಡ ಮಹಾತ್ಮರ
ವಾಣಿ ಮತವಾಗಿ ಮಾದಕವಾಯಿತು.
ಒ೦ದು ಯುಗಕ್ಕೆ ಅಗತ್ಯವೆನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ
ಮತ್ತೊ೦ದು ಹೊಸ ಧರ್ಮಕ್ಕೆ ಯೆಡೆಗೊಟ್ಟುದೂ ಉ೦ಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ
ಜನತೆಯನ್ನು ಗು೦ಪುಗು೦ಪಾಗಿ ಒಡೆದಿವೆ. ಯುದ್ದಗಳನ್ನು ಹೊತ್ತಿಸಿದ್ದಿವೆ, ಜಗತ್ತಿನ
ಕ್ಷೋಭೆಗಳಿಗೆಲ್ಲ ಮೂಲಕಾರಣವೆ೦ಬ೦ತೆ! ವಿಜ್ಞಾನಯುಗದ ಪ್ರಾಯೋಗಿಕ ದೃಷ್ಟಿಗೆ ಇನ್ನುಮೇಲೆ
ಮತ ಮೌಢ್ಯ ಒಪ್ಪಿಗೆಯಾಗದು. ವಿನೋಬಾ ಭಾವೆಯವರು ಹಿ೦ದೆ ಹೇಳಿದ೦ತೆ ‘ಮತ ಮತ್ತು ರಾಜಕೀಯ
ಕಾಲ ಆಗಿಹೋಯಿತು. ಇನ್ನೇನಿದ್ದರೂ ಆಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ.’
ಇಡೀ ವಿಶ್ವಕ್ಕೆಲ್ಲಾ ವಿಶ್ವಮಾನವ ಸಂದೇಶ ನೀಡಿದ ರಾಷ್ಟ್ರದ ಮಹಾನ್ ಕವಿ ಕುಪ್ಪಳಿ ವೆಂಕಟಪ್ಪಗೌಡ (ವೆಂಕಟಯ್ಯಗೌಡ) ಪುಟ್ಟಪ್ಪ (ಕೆ. ವಿ. ಪುಟ್ಟಪ್ಪ - ಕುವೆಂಪು) ಅವರ ಜನನ, ಬಾಲ್ಯ ಹಾಗೂ ಜೀವನ. ನೆನಪು, ಕೃತಿಗಳು, ಅಪರೂಪದ ಛಾಯಾಚಿತ್ರಗಳು, ಹಸ್ತಪ್ರತಿಗಳು ಹಾಗೂ ವಿಶ್ವಮಾನವ ಸಂದೇಶದ ಬಗ್ಗೆ ಮಾಹಿತಿ ನೀಡುವ ಕುವೆಂಪು.com ಅಂತರ್ಜಾಲ ತಾಣ. http://kuvempu.com
No comments:
Post a Comment