ಅಂತರ್ಜಾಲದಲ್ಲಿ ವಿವಿಧ ನಮೂನೆಯ ಕಡತಗಳನ್ನು ಪೇರಿಸಿಡಲು ಅವಕಾಶ ನೀಡುವ ತಾಣಗಳು
ಹಲವಿವೆ. ಅವುಗಳಲ್ಲಿ ಇತ್ತೀಚೆಗೆ ಜನಪ್ರಿಯವಾಗಿರುವ ತಾಣವೆಂದರೆ ಸ್ಕ್ರಿಬ್ಡ್.ಕಾಮ್ ಜಾಲತಾಣ
ಇಲ್ಲಿ ಜನರು ತಮ್ಮ ಕಡತಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಅವಕಾಶವೂ ಇರುವುದರಿಂದ
ವಿವಿಧ ಬಗೆಯ ಮಾಹಿತಿಗಳನ್ನು ಹೊತ್ತ ಕಡತಗಳನ್ನು ಇಲ್ಲಿಂದ ಇಳಿಸಿಕೊಳ್ಳಲೂ
ಸಾಧ್ಯ. ಪುಸ್ತಕಗಳ ಇ-ಪ್ರತಿಗಳು, ವಿವಿಧ ವಿಷಯಗಳ ಬಗ್ಗೆ ಪವರ್ ಪಾಯಿಂಟ್ ಸ್ಲೈಡುಗಳು ಹಾಗೂ ಪಿ.ಡಿ.ಎಫ್
ಕಡತಗಳು ಇಲ್ಲಿ ಸಿಗುತ್ತವೆ. ಹೆಚ್ಚು ಜನರು ಡೌನ್‌ಲೋಡ್ ಮಾಡಿಕೊಳ್ಳುತ್ತಿರುವ ಕಡತಗಳ ಪಟ್ಟಿ
ಇಲ್ಲಿ ಲಭ್ಯವಿರುವುದರಿಂದ, ಉತ್ತಮ ಕಡತಗಳನ್ನು ಆಯ್ದುಕೊಳ್ಳುವುದಿಲ್ಲಿ ಬಹು ಸುಲಭ. ಹಣ ಪಾವತಿ
ಮಾಡಿ ಉಪಯೋಗಿಸಬಹುದಾದ ಕಡತಗಳೂ ಇಲ್ಲಿವೆ. ಜಾಲತಾಣ ವಿಳಾಸ ಕೊಂಡಿ. www.scribd.com.
No comments:
Post a Comment