ಸತ್ತ ನಂತರ ವ್ಯಕ್ತಿಯ ಆಸ್ತಿಯ ವಿಲೇವಾರಿ ಮಾಡಲು ಉಯಿಲು ಬರೆದಿಡುವುದಿದೆ.ಈಗ ಡಿಜಿಟಲ್ ಉಯಿಲು ಕೂಡಾ ಸಾಧ್ಯ. ಅಂತಹ ತಾಣಗಳು ವ್ಯಕ್ತಿಯ ಡಿಜಿಟಲ್ ಉಯಿಲನ್ನು ತಿಳಿದುಕೊಂಡು, ಆತನ ಮರಣಾನಂತರ, ಆತನ
ಅಂತಿಮ ಅಭಿಲಾಷೆಯನ್ನು ನೆರವೇರಿಸಿಕೊಡಲು ಸಹಾಯ ಮಾಡುತ್ತವೆ. ಡಿಜಿಟಲ್ ಉಯಿಲು
ಮುಖ್ಯವಾಗಿ, ವ್ಯಕ್ತಿಯ ಅಂತರ್ಜಾಲದ ಬದುಕಿನ ಬಗ್ಗೆ ಇರುತ್ತದೆ. ಆತನ ಮಿಂಚಂಚೆ
ಖಾತೆಗಳು, ಫೇಸ್‌ಬುಕ್, ಟ್ವಿಟರ್ ಅಂತಹ ಖಾತೆಗಳು, ಆತನ ಬ್ಲಾಗುಗಳು ಇವನ್ನು ಮರಣಾನಂತರ
ಹೇಗೆ ನಿರ್ವಹಿಸಬೇಕೆನ್ನುವುದು ವ್ಯಕ್ತಿಯ ಅಂತಿಮ ಆಸೆ ಎನ್ನುವುದನ್ನು ತಿಳಿದುಕೊಂಡು, ಆ
ಪ್ರಕಾರ ಕ್ರಮ ತೆಗೆದುಕೊಳ್ಳಲು ಈ ಅಂತರ್ಜಾಲ ತಾಣಗಳು ಸಹಾಯ ಮಾಡುತ್ತವೆ. ಸತ್ತ ನಂತರವೂ
ಖಾತೆಗಳು ಚಾಲೂ ಇರುವುದು, ಆಭಾಸಕ್ಕೆ ದಾರಿ ಮಾಡಿಕೊಡುವುದನ್ನು ತಡೆಯಲು ಈ ಕ್ರಮ ಸಹಾಯ
ಮಾಡುತ್ತದೆ. ವ್ಯಕ್ತಿ ಬಯಸಿದರೆ, ಆತನ ಮಿಂಚಂಚೆ ಸಂಪರ್ಕಗಳಿಗೆ, ಆತನ ಮರಣದ ಬಗ್ಗೆ
ತಿಳಿಸುವುದು, ಬ್ಲಾಗ್-ಸಾಮಾಜಿಕ ಜಾಲತಾಣಗಳ ಆತನ ಸ್ನೇಹಿತರಿಗೆ ವ್ಯಕ್ತಿಯ ಅಂತ್ಯದ ಬಗ್ಗೆ
ತಿಳಿಸುವುದೇ ಮುಂತಾದ ಅಗತ್ಯ ಕ್ರಮಗಳನ್ನು ಈ ತಾಣಗಳು
ತೆಗೆದುಕೊಳ್ಳುತ್ತವೆ. ಬಯಸಿದರೆ, ಖಾತೆಗಳನ್ನು ಅಮಾನತುಗೊಳಿಸಲೂ ಸಾಧ್ಯ. ಈ ಸೇವೆಯು
ಉಚಿತವಾಗಿ ಲಭ್ಯವಿದೆ. ಈ ಸೇವೆಯಲ್ಲಿ ಹತ್ತು ಖಾತೆಗಳನ್ನು ಅಮಾನತು ಮಾಡುವ ಸೇವೆಯಷ್ಟೇ
ಸಿಗುತ್ತದೆ. ಆದರೆ ಮುನ್ನೂರು ಡಾಲರು ತೆತ್ತರೆ, ಬಯಸಿದ ಸೇವೆಯನ್ನು ನೀಡಲಾಗುತ್ತದೆ. http://legacylocker.com
No comments:
Post a Comment